ಜು ೧೦:
ದರ್ಶನ್ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಾಡಿದ್ದಾರೆ. ‘ಜೈಲು ನಿಯಮಾವಳಿಗಳಲ್ಲಿ ಮನೆ ಊಟಕ್ಕೆ ಅವಕಾಶವಿದೆ. ಆದರೆ ದರ್ಶನ್ಗೆ ಮನೆ ಊಟದ ಅವಕಾಶ ನೀಡಿಲ್ಲ’ ಎಂದು ವಾದ ಮಾಡಿದ್ದಾರೆ. ಈ ವಾದದ ಬಗ್ಗೆ ಮಾತನಾಡಿದ ನ್ಯಾಯಮೂರ್ತಿ ಕೃಷ್ಣಕುಮಾರ್ ಅವರು, ‘ಮನೆಯಿಂದ ಊಟ, ಹಾಸಿಗೆ, ಪುಸ್ತಕ ಪಡೆಯಲು ಕೋರಿದ್ದೀರಿ. ಈ ಬಗ್ಗೆ ಈ ಹಿಂದಿನ ಕೋರ್ಟ್ ತೀರ್ಪುಗಳಿವೆಯೇ? ಜೈಲು ಕೈಪಿಡಿಯಲ್ಲಿ ಮನೆ ಊಟದ ಬಗ್ಗೆ ನಿಯಮವಿದೆಯೇ? ಜೈಲು ಅಧಿಕಾರಿಗಳಿಗೆ ನೀವು ಮನವಿ ಮಾಡಿದ್ದೀರಿ. ವಿಚಾರಣಾ ನ್ಯಾಯಾಲಯದಲ್ಲಿ ಮನವಿ ಸಲ್ಲಿಸದೇ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬಹುದೇ? ಕೈದಿಗಳಿಗಿರುವ ಕಾನೂನು ಈ ಬಗ್ಗೆ ಏನು ಹೇಳುತ್ತದೆ’ ಎಂದು ಪ್ರಶ್ನೆ ಮಾಡಿದ್ದಾರೆ.‘ಇದನ್ನು ಬೇರೆ ಪ್ರಕರಣಗಳಂತೆ ಪರಿಗಣಿಸಲಾಗುವುದು.
ಇದನ್ನು ಓದಿ :ನೇಹಾ ಕೊಲೆ: ಲವ್ ಜಿಹಾದ್ ಉಲ್ಲೇಖವಿಲ್ಲ, ಮದುವೆಗೆ ನಿರಾಕರಿಸಿದ್ದಕ್ಕೆ ಹತ್ಯೆ,ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ
ಕಾನೂನಿನ ಅನುಸಾರವೇ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ನ್ಯಾಯಮೂರ್ತಿ ಕೃಷ್ಣಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ತನಿಖಾಧಿಕಾರಿಗಳು, ಜೈಲು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸದ್ಯ ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಲಾಗಿದೆ.