ಸೆ.೨೬:- ಪ್ರಖ್ಯಾತ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) 2024 ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಬೆಂಗಳೂರು ಕೇಂದ್ರಸ್ಥಾನದ ಹ್ಯೂಮನ್ ಸ್ಪೇಸ್ ಫ್ಲೈಟ್ ಸೆಂಟರ್ (Human Space Flight Center) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 09, 2024 ಆಗಿದ್ದು, ಅರ್ಜಿ ಸಲ್ಲಿಸುವುದು ಹೇಗೆ, ಅರ್ಹತೆ ಮತ್ತು ಆಯ್ಕೆಯ ವಿಧಾನ ಕುರಿತು ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ:
| ಹುದ್ದೆ | ಹುದ್ದೆಗಳ ಸಂಖ್ಯೆ | ವಿದ್ಯಾರ್ಹತೆ |
|---|---|---|
| ಮೆಡಿಕಲ್ ಆಫೀಸರ್ | 3 | ಎಮ್.ಬಿ.ಬಿ.ಎಸ್, ಎಂ.ಡಿ |
| ಸೈಂಟಿಸ್ಟ್ ಎಂಜಿನಿಯರ್ | 10 | ಬಿ.ಇ/ಬಿ.ಟೆಕ್/ಎಂ.ಟೆಕ್ |
| ಟೆಕ್ನಿಕಲ್ ಅಸಿಸ್ಟೆಂಟ್ | 28 | ಡಿಪ್ಲೊಮಾ |
| ಸೈಂಟಿಫಿಕ್ ಅಸಿಸ್ಟೆಂಟ್ | 1 | ಬಿ.ಎಸ್.ಸಿ, ಪದವಿ |
| ಟೆಕ್ನೀಷಿಯನ್-ಬಿ (ಫಿಟ್ಟರ್) | 22 | 10ನೇ ತರಗತಿ, ಐಟಿಐ |
| ಟೆಕ್ನೀಷಿಯನ್-ಬಿ (ಎಲೆಕ್ಟ್ರಾನಿಕ್ ಮೆಕ್ಯಾನಿಕ್) | 12 | 10ನೇ ತರಗತಿ, ಐಟಿಐ |
| ಟೆಕ್ನೀಷಿಯನ್-ಬಿ (ಎಸಿ ಮತ್ತು ರೆಫ್ರಿಜರೇಷನ್) | 1 | 10ನೇ ತರಗತಿ, ಐಟಿಐ |
| ಡ್ರಾಫ್ಟ್ಮ್ಯಾನ್-ಬಿ (ಮೆಕ್ಯಾನಿಕಲ್) | 9 | 10ನೇ ತರಗತಿ, ಐಟಿಐ |
| ಡ್ರಾಫ್ಟ್ಮ್ಯಾನ್-ಬಿ (ಸಿವಿಲ್) | 4 | 10ನೇ ತರಗತಿ, ಐಟಿಐ |
| ಅಸಿಸ್ಟಂಟ್ (ರಾಜಭಾಷಾ) | 5 | ಪದವಿ |
ವಯೋಮಿತಿ:PDF ಗಾಗಿ ಇಲ್ಲಿ ಕ್ಲಿಕ್ ಮಾಡಿ
ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ. ಮೀಸಲಾತಿಯೊಂದಿಗೆ ವಯೋಮಿತಿಯಲ್ಲಿ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.
ಆಯ್ಕೆಯ ವಿಧಾನ:
- ಲಿಖಿತ ಪರೀಕ್ಷೆ
- ಸ್ಕಿಲ್ ಟೆಸ್ಟ್
- ಸಂದರ್ಶನ
ಅರ್ಜಿ ಶುಲ್ಕ:
ಅಭ್ಯರ್ಥಿಗಳು 750 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿದೆ.
ಅರ್ಜಿ ಸಲ್ಲಿಕೆ:
ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು https://cdn.digialm.com/EForms/configuredHtml/1258/90047/Registration.html ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಹುದ್ದೆಗಳ ಅರ್ಹತೆಯನ್ನು ಪರಿಶೀಲಿಸಿ, ತಮ್ಮ ಅರ್ಜಿಯನ್ನು ಅಕ್ಟೋಬರ್ 9, 2024 ಒಳಗೆ ಸಲ್ಲಿಸಬೇಕು.
- ಆರು ತಿಂಗಳಿಂದ ಕಮಿಷನ್ ಬಾಕಿ — ನವೆಂಬರ್ ಪಡಿತರ ಎತ್ತುವಳಿ ನಿಲ್ಲಿಸಲು ವಿತರಕರ ಸಂಘದ ಎಚ್ಚರಿಕೆ
- ಯಾದಗಿರಿ ರೈತರಿಗೆ ಭಾರತ ಮಾಲಾ ಯೋಜನೆ ಬಾಧೆ — ಪರಿಹಾರ ಧನ ಹಾಗೂ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಡಾ. ಭೀಮಣ್ಣ ಮೇಟಿ ಆಗ್ರಹ
- ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ; ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮಲ್ಲಪ್ಪ ಸಂಕೀನ್ ನಾಮಪತ್ರ ಸಲ್ಲಿಕೆ
- ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯನಟ ರಾಜು ತಾಳಿಕೋಟಿ ಹೃದಯಾಘಾತದಿಂದ ನಿಧನ
- ಸಾರ್ವಜನಿಕ–ಅಧಿಕಾರಿ ಸಂವಾದ ಅಗತ್ಯ: RTI ಕಾಯ್ದೆ ಪರಿಣಾಮಕಾರಿತ್ವಕ್ಕೆ ಆಯುಕ್ತ ಬದ್ರುದ್ದೀನ್ ಕರೆ

