Wed. Feb 11th, 2026

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್: ಮೂವರು ಕಿಡಿಗೇಡಿಗಳ ಬಂಧನ

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್: ಮೂವರು ಕಿಡಿಗೇಡಿಗಳ ಬಂಧನ

ಬೆಂಗಳೂರು: ನಟಿ ರಮ್ಯಾಗೆ ಅಶ್ಲೀಲ ಹಾಗೂ ಬೆದರಿಕೆಭರಿತ ಸಂದೇಶಗಳನ್ನು ಕಳಿಸಿದ್ದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಬಳ್ಳಾರಿ ಹಾಗೂ ಚಿತ್ರದುರ್ಗದ ಮೂಲದ ಇಬ್ಬರು ಸೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಸೈಬರ್ ಠಾಣೆಯಲ್ಲಿ ರಮ್ಯಾ ನೀಡಿದ್ದ ದೂರಿನ ಮೇರೆಗೆ ಕ್ರಮ ಜರುಗಿಸಲಾಗಿದೆ.

ಸಿಸಿಬಿ ಪೊಲೀಸರು ಈಗಾಗಲೇ 43 ಇನ್ಸ್ಟಾಗ್ರಾಮ್ ಅಕೌಂಟ್‌ಗಳನ್ನು ಪತ್ತೆಹಚ್ಚಿ ತನಿಖೆ ಮುಂದುವರೆಸಿದ್ದಾರೆ. ರಮ್ಯಾ ಅವರಿಗೆ ಬಂದ ಅಶ್ಲೀಲ ಸಂದೇಶಗಳು, ಕರೆಗಳು ಮತ್ತು ಇನ್ಬಾಕ್ಸ್‌ ಸಂದೇಶಗಳ ಕುರಿತಾಗಿ ಮಾಹಿತಿ ಸಂಗ್ರಹಿಸಲಾಗಿದೆ.

ಜುಲೈ 24ರಂದು ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ರಮ್ಯಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದರು. ಅದಾದ ಬಳಿಕ ನಟ ದರ್ಶನ್ ಅಭಿಮಾನಿಗಳಿಂದ ನಿಂದನೆಗಳು, ಅಶ್ಲೀಲ ಸಂದೇಶಗಳು ಹರಿದಾಡಿದ್ದು, ಈ ಬಗ್ಗೆ ರಮ್ಯಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ʼಇಂತಹ ಸ್ತ್ರೀ ದ್ವೇಷಿ ಮನಸ್ಥಿತಿಯಿಂದಲೇ ಸಮಾಜದಲ್ಲಿ ಅತ್ಯಾಚಾರಗಳು ಹೆಚ್ಚಾಗುತ್ತಿವೆʼ ಎಂದು ರಮ್ಯಾ ಪ್ರತಿಕ್ರಿಯಿಸಿದ್ದರು.

ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ, ಎಲ್ಲಾ ಮಹಿಳೆಯರ ಪರವಾಗಿ ದೂರು ನೀಡಿರುವುದಾಗಿ ನಟಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳಾ ಆಯೋಗ ಕೂಡ ಹಸ್ತಕ್ಷೇಪಿಸಿ ಪೊಲೀಸರಿಗೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದೆ.

Related Post

Leave a Reply

Your email address will not be published. Required fields are marked *

error: Content is protected !!