Mon. Jul 21st, 2025

ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ವಸತಿ ನಿಲಯದ ಆಹಾರದಲ್ಲಿ ಹುಳು ಪತ್ತೆ ; ವಿದ್ಯಾರ್ಥಿಗಳ ಪ್ರತಿಭಟನೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ವಸತಿ ನಿಲಯದ ಆಹಾರದಲ್ಲಿ ಹುಳು ಪತ್ತೆ ; ವಿದ್ಯಾರ್ಥಿಗಳ ಪ್ರತಿಭಟನೆ.

ಸುರಪೂರ, ಸೆ. 21: ನಗರದಲ್ಲಿನ ಅಲ್ಪಸಂಖ್ಯಾತರ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಸತಿ

ನಿಲಯದಲ್ಲಿನ ಆಹಾರದಲ್ಲಿ ಹುಳುಗಳು ಪತ್ತೆಯಾಗಿದ್ದು, ಇದನ್ನು ವಿದ್ಯಾರ್ಥಿಗಳು ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತ ನಾಡಿದ ವಿದ್ಯಾರ್ಥಿ ಗಳು, ಮದ್ಯಾನದ ಊಟದಲ್ಲಿ ಬಾಲ ಹುಳುಗಳು ಪತ್ತೆ ಯಾಗಿದ್ದು ಇದನ್ನು ಪ್ರಶ್ನಿಸಿದರೆ ಅಡುಗೆ ಸಿಬ್ಬಂದಿಗಳು ತಮ್ಮ ಮೇಲೆ ದಬ್ಬಾಳಿಕೆ ನಡೆಸುತ್ತಾರೆ ಎಂದು ಆರೋಪಿಸಿದರು, ಮೇಲ್ವಿಚಾರಕರು ವಿದ್ಯಾರ್ಥಿಗಳೊಂದಿಗೆ ಸರಿಯಾಗಿ ವರ್ತಿಸುವುದಿಲ್ಲ ಆದ್ದರಿಂದ ಇಂತಹ ಹುಳುಬಿದ್ದ ಆಹಾರ ತಯಾರಿಸಿದ ಅಡುಗೆ ಸಿಬ್ಬಂದಿಯವರ ಮೇಲೆ ಮತ್ತು ವಸತಿ ನಿಲಯದ ಮೇಲ್ವಿಚಾರಕರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಂತರ ಪ್ರತಿಭಟನಾ ಸ್ಥಳಕ್ಕೆ ವಸತಿ ನಿಲಯದ ಮೇಲ್ವಿಚಾರಕು ಆಗಮಿಸಿ ವಿದ್ಯಾರ್ಥಿಗಳ ಬೇಡಿಕೆ ಆಲಿಸಿ,ನಂತರ ಈ ಮುಂದೆ ಇಂತಹ ಘಟನೆ ಮರುಕಳಿಸದಂತೆ ಗಮನ ವಹಿಸುವ ಜೊತೆಗೆ ಅಡುಗೆ ಸಿಬ್ಬಂದಿಗಳನ್ನು ಬದಲಾಯಿಸುವುದಾಗಿ

ಭರವಸೆ ಪತ್ರವನ್ನು ತಹಸೀಲ್ದಾರರಿಗೆ ಬರೆದು ಕೊಟ್ಟನಂತರ ಪ್ರತಿಭಟನೆ ನಿಲ್ಲಿಸಲಾಯಿತು.ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯದ ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Whatsapp Group Join
facebook Group Join

Related Post

Leave a Reply

Your email address will not be published. Required fields are marked *

error: Content is protected !!