ಸಾವನ್ನಪ್ಪಿರುವುದು ವಿಷಾದಕರ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟ್ವಿಟ್ ಮಾಡಿದ್ದಾರೆ. ಔಷಧಿ ಕೊರತೆಯಿಂದ ರೋಗಿಗಳು ಸಾವನ್ನಪ್ಪಿರುವುದು ಬೇಸರದ ಸಂಗತಿ. ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಿ ಪ್ರಚಾರ ಮಾಡುತ್ತಿರುವ ಬಿಜೆಪಿ ಸರಕಾರಕ್ಕೆ ಮಕ್ಕಳಿಗೆ ಔಷಧಿ ಕೊಡಲು ಹಣವಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯ ದೃಷ್ಟಿಯಲ್ಲಿ ಬಡವರ ಜೀವಕ್ಕೆ ಬೆಲೆ ಇಲ್ಲ ಎಂದು ರಾಹುಲ್ ಟೀಕಿಸಿದ್ದಾರೆ.
ಮಹಾರಾಷ್ಟ್ರದ ನಾಂದೇಡ್ ದಲ್ಲಿರುವ ಶಂಕರರಾವ್ ಚವ್ಹಾಣ್ ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನದಲ್ಲಿ 12 ನವಜಾತ ಶಿಶುಗಳು ಸೇರಿ, 24 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಔಷಧಿ & ಸಿಬ್ಬಂದಿಗಳ ಕೊರತೆಯಿಂದ ಸಾವುಗಳು ಸಂಭವಿಸಿವೆ ಎನ್ನಲಾಗಿದೆ. ‘ನಾವು ಸಾಧ್ಯವಾದಷ್ಟು ಹತ್ತಿರದಿಂದ ಔಷಧಿಗಳನ್ನು ಖರೀದಿಸಿದ್ದೇವೆ. ಆದರೆ, ಸರ್ಕಾರದಿಂದ ನಮಗೆ ಏನೂ ಸಿಕ್ಕಿಲ್ಲ’ ಎಂದು ಆಸ್ಪತ್ರೆ ಮುಖ್ಯಸ್ಥ ಡಾ ಶ್ಯಾಮರಾವ್ ವಾಕೋಡೆ ಆರೋಪಿಸಿದ್ದಾರೆ.