ಲೋಕಸಭೆ ಚುನಾವಣೆಗಾಗಿ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಆದರೆ, ಎರಡು ಪಕ್ಷಗಳಲ್ಲಿಯೂ ಮೈತ್ರಿ ವಿಚಾರವಾಗಿ ಅಸಮಾಧಾನ ಸ್ಫೋಟಗೊಂಡಿದೆ. ಜೆಡಿಎಸ್‌ನ ಕರೆಮ್ಮಾ ನಾಯಕ್, ಶರಣಗೌಡ ಕಂದಕೂರು, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ,ಇಬ್ರಾಹಿಂ, ಅಲ್ಪ ಸಂಖ್ಯಾತ ಮುಖಂಡರು ಹಾಗೂ ತಳಮಟ್ಟದ ಕಾರ್ಯಕರ್ತರು ಬಿಜೆಪಿ ಜೊತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನೂ, ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕೂಡ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ

