ಯಾದಗಿರಿ ಅ8: ಸರ್ಕಾರದ ವತಿಯಿಂದ ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರನ್ನು ಸೇರ್ಪಡೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ಭೀಮರಾಯ.ಎಮ್ ಅವರು ತಿಳಿಸಿದ್ದಾರೆ.
ಈ ತಿಂಗಳು 2023ರ ಅಕ್ಟೋಬರ್ 11 ರಿಂದ ಅಕ್ಟೋಬರ್ 13ರ ವರೆಗೆ ಪ್ರತಿ ದಿನ ಬೆಳಿಗ್ಗೆ 10 ರಿಂದ ಸಂಜೆ 7 ಗಂಟೆಯ ವರೆಗೆ ಕಾಲವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಈ ದಿನಾಂಕಗಳಂದು ತಮ್ಮ ಪಡಿತರ ಚೀಟಿಗಳ ತಿದ್ದುಪಡಿ ಹಾಗೂ ಸೇರ್ಪಡೆಗಾಗಿ ನಿಮ್ಮ ಹತ್ತಿರದ ಗ್ರಾಮ್ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

