Tue. Jul 22nd, 2025

Belagavi:ಡಿ. 4ರಂದು ಸುವರ್ಣಸೌಧಕ್ಕೆ ರೈತರಿಂದ ಮುತ್ತಿಗೆ ।ಕೊಡಿಹಳ್ಳಿ

Belagavi:ಡಿ. 4ರಂದು ಸುವರ್ಣಸೌಧಕ್ಕೆ ರೈತರಿಂದ ಮುತ್ತಿಗೆ ।ಕೊಡಿಹಳ್ಳಿ

ಡಿ ೦೨:

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ 15 ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಧಿವೇಶನದ ಮೊದಲ ದಿನವೇ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ  ರಾಜ್ಯ ರೈತ ಸಂಘ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದ್ದಾರೆ.

ಈ ಕುರಿತು ಇಂದು ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್ ಅವರು, ಅಧಿವೇಶನದ ಮೊದಲ ದಿನ ಸೋಮವಾರ ಬೆಳಗ್ಗೆ 11 ಗಂಟೆಗೆ ಚನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಹೋಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದರು.

ರಾಜ್ಯದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಾದಯಾತ್ರೆ ಮೂಲಕ ತೆರಳಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಕೇಂದ್ರ ಸರ್ಕಾರ ಕೃಷಿ ಕಾಯ್ದೆಯನ್ನು ವಾಪಸ್ ಪಡೆದಿದೆ. ಆದರೆ ರಾಜ್ಯ ಸರ್ಕಾರ ಕೃಷಿ ಕಾಯ್ದೆಯನ್ನು ಇನ್ನೂ ವಾಪಸ್ ಪಡೆದಿಲ್ಲ. ಬಿಜೆಪಿಯವರು ತಂದಿರುವ ಕೃಷಿ ಕಾಯ್ದೆಯನ್ನೇ ಈಗ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಲು ಮುಂದಾಗಿ ಎಂದು ಕೊಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದರು.

ಈ ಹಿಂದೆ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಬಲಿಸಿದ್ದರು. ಕಳೆದ ಅಧಿವೇಶನದಲ್ಲಿ ಸಚಿವ ಶಿವಾನಂದ ಪಾಟೀಲ್ ಕೃಷಿ ಕಾಯ್ದೆ ವಾಪಸ್ ಪಡೆಯುವ ಬಿಲ್ ಮಂಡಿಸಲು ಮುಂದಾಗಿದ್ದರು. ಆಗ ವಿಪಕ್ಷದವರು ವಿರೋಧಿಸಿದ್ದರು. ಈಗ ಬಿಜೆಪಿಯವರು ತಂದಿರೋ ಕೃಷಿ ಕಾಯ್ದೆಯನ್ನೇ ಯಥಾವತ್ತಾಗಿ ಜಾರಿಗೊಳಿಸಲು ರಾಜ್ಯ ಸರ್ಕಾದ ಮುಂದಾಗಿದೆ. ಬಿಜೆಪಿ ಜಾರಿಗೆ ತಂದಿರುವ ಭೂಸುಧಾರಣಾ ಕಾಯ್ದೆಯನ್ನು ಅನುಷ್ಠಾನಗೊಳಿಸುವ ಕೆಲಸವನ್ನ ಕಾಂಗ್ರೆಸ್ ಅಚ್ಚುಕಟ್ಟಾಗಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Whatsapp Group Join
facebook Group Join

Related Post

Leave a Reply

Your email address will not be published. Required fields are marked *

error: Content is protected !!