Tue. Jul 22nd, 2025

ಭ್ರೂಣ ಹತ್ಯೆ ಸುಳಿವು ಕೊಟ್ಟರೆ ರೂ.1 ಲಕ್ಷ ನಗದು ಬಹುಮಾನ- ಆರೋಗ್ಯ ಇಲಾಖೆ ಘೋಷಣೆ

ಭ್ರೂಣ ಹತ್ಯೆ ಸುಳಿವು ಕೊಟ್ಟರೆ ರೂ.1 ಲಕ್ಷ ನಗದು ಬಹುಮಾನ- ಆರೋಗ್ಯ ಇಲಾಖೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1

ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಇದಲ್ಲದೇ ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ.

ರಾಜ್ಯದ ಯಾವುದೇ ಭಾಗದ ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಸ್ಪಷ್ಟವಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದವರಿಗೆ ಒಂದು ಲಕ್ಷಣ ರೂಪಾಯಿ ಬಹುಮಾನ ಹಣ ನೀಡುತ್ತೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಸಾರ್ವಜನಿಕರ ಸಹಾಯಕ್ಕಾಗಿ ಆರೋಗ್ಯ ಇಲಾಖೆ ಸಹಾಯವಾಣಿ ತೆರೆದಿದ್ದು, 080-25202264/65ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದೆ.

ಹೆಣ್ಣು ಭ್ರೂಣ ಹತ್ಯೆ ತಡೆಗೆ ರಾಜ್ಯ ಸರ್ಕಾರ ಕಾನೂನು ತಿದ್ದುಪಡಿ, ರಾಜ್ಯಮಟ್ಟದ ಕಾರ್ಯಪಡೆ ರಚನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಲಿಂಗ ಪತ್ತೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಚಿವರು, ಕಳೆದ ವರ್ಷ 1,000 ಪುರುಷರಿಗೆ 947 ಮಹಿಳೆಯರಿದ್ದರು. ಈ ವರ್ಷ 929 ಇದ್ದಾರೆ. ಮಹಿಳೆಯರ ಸಂಖ್ಯೆ ಕಡಿಮೆಯಾಗಿದೆ ಎಂದರು.

Whatsapp Group Join
facebook Group Join

Related Post

Leave a Reply

Your email address will not be published. Required fields are marked *

error: Content is protected !!