Mon. Dec 1st, 2025

ಸರ್ಕಾರದ ಗ್ಯಾರೆಂಟಿ ಯೋಜನೆ ವಿರುದ್ದ ಬಸವರಾಜ ಬೊಮ್ಮಾಯಿ ವಾಗ್ದಾಳಿ

ಸರ್ಕಾರದ  ಗ್ಯಾರೆಂಟಿ ಯೋಜನೆ ವಿರುದ್ದ ಬಸವರಾಜ ಬೊಮ್ಮಾಯಿ ವಾಗ್ದಾಳಿ

ಸರ್ಕಾರ  ಗ್ಯಾರೆಂಟಿ ಗಳ ಹೆಸರಲ್ಲಿ ವಂಚನೆ , ಟ್ರಾನ್ಸ್ಪರಗಳ   ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ  ನಾಯಕ ಯಡಿಯೂರಪ್ಪ ಅವರ ನೇತರತ್ವದಲ್ಲಿ ಸರ್ಕಾರದ ವಿರುದ್ದ ವಾಗ್ದಾಳಿ ಸಿಡಿಸಿದ್ದು .‌ ಇದನ್ನು ಮುಂದಿನ ವರ್ಷದಲ್ಲಿ  ರಾಜ್ಯದ ಎಲ್ಲ ಮನೆಗಳಿಗೆ ತಲುಪಿಸಿ  ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು  ಆರಂಭಿಸಿದ್ದೇವೆ .

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನವರು, ಗ್ಯಾರೆಂಟಿಗಳ ಹೆಸರಿನಲ್ಲಿ ಸಹಿ ಮಾಡಿ ಕೊಟ್ಟರು,  ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಇವರು ಕೊಡುತ್ತಿರುವ ಐದು ಕೆಜಿ ಅಕ್ಕಿ ಮೋದಿಯವರು ಕೊಡುತ್ತಿದ್ದು .  ಅಕ್ಕಿ ಬದಲು ಹಣ ಕೊಡುತ್ತೇವೆ ಅಂತ ಹೇಳಿ, ಗ್ರಾಮೀಣ ಮಹಿಳೆಯ ಅರ್ಧ ದಿನದ ಕೂಲಿಯಷ್ಟು ಹಣ ಕೊಡುತ್ತಿಲ್ಲ. ಅನ್ನ ಭಾಗ್ಯದಲ್ಲಿ ದ್ರೋಹ ಮಾಡಿದ್ದಾರೆ‌ ಎಂದು ವಾಗ್ದಾಳಿ ನಡೆಸಿದರು.

ನವೇಂಬರತಿಂಗಳ್ಳಿ   ಕತ್ತಲೆ ರಾತ್ರಿ 

ಝಿರೊ ಕರೆಂಟ್ ಝಿರೊ ಬಿಲ್ ಯೋಜನೆ ಜಾರಿಗೆ ಬರುತ್ತದೆ ಎಂದು, ರಾಜ್ಯದಲ್ಲಿ 200 ಯುನಿಟ್ ಫ್ರೀ ಕರೆಂಟ್ ಕೊಡುವುದಾಗಿ ಹೇಳಿ ಈಗ ರಾಜ್ಯದಲ್ಲಿ ಕರೆಂಟ್ ಸಿಗದ ಪರಿಸ್ಥಿತಿ ನಿರ್ಮಾಣ ಆಗಿದೆ. ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ನವೆಂಬರ್ ನಿಂದ ರಾಜ್ಯದಲ್ಲಿ ಕತ್ತಲೆ ಆವರಿಸುತ್ತದೆ ಎಂದರು.

ರಾಜ್ಯದ ಜನರು ಲೋಕಸಭೆ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.‌ಯಡಿಯೂರಪ್ಪ, ಡಿ.ವಿ. ಸದಾನಂದಗೌಡ , ಮಾಜಿ ಸಚಿವರಾದ ಆರ್ ಅಶೋಕ್, ಗೋಪಾಲಯ್ಯ, ಮುನಿರತ್ನ, ಬೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಮಾಜಿ ಸಚಿವರು ಶಾಸಕರು ಪಾಲ್ಗೊಂಡಿದ್ದರು.

Related Post

Leave a Reply

Your email address will not be published. Required fields are marked *

error: Content is protected !!