Tue. Jul 22nd, 2025

ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ-Phruthvi Madhyma

ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ-Phruthvi Madhyma

ಡಿ ೨೮:

ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಬೀರಾವರ ಗ್ರಾಮದಲ್ಲಿ ನಡೆದಿದೆ. ಮಕ್ಕಳಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದ್ದರಿಂದ ತೀವ್ರ ಸುಸ್ತಾಗಿದ್ದರು. ಹೀಗಾಗಿ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬೀರಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಮಧ್ಯಾಹ್ನ ಅನ್ನ ಸಾಂಬಾರ್ ಊಟ ಮಾಡಿದ್ದರು. ಸುಮಾರು 60 ಮಕ್ಕಳಿಗೆ ವಾಂತಿ, ಭೇದಿಯಾಗಿ ಅಸ್ವಸ್ಥರಾಗಿದ್ದಾರೆ. ಇನ್ನು ಕೆಲ ಮಕ್ಕಳಿಗೆ ಮೂಗಿನಲ್ಲಿ ರಕ್ತಸ್ರಾವವಾಗಿದೆ. ಹೀಗಾಗಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಕ್ಕಳ ಆರೋಗ್ಯ ಸ್ಥಿರವಾಗಿದ್ದು, ಪ್ರತ್ಯೇಕ ವಾರ್ಡ್‌ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಕಲುಷಿತ ಆಹಾರ ಸೇವನೆಯಿಂದ ವಾಂತಿ–ಭೇದಿ ಕಾಣಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಶಾಲೆಯಲ್ಲಿ ಮಧ್ಯಾಹ್ನ 12.45ಕ್ಕೆ ಈ ಮಕ್ಕಳಿಗೆ ಬಿಸಿಯೂಟ ನೀಡಲಾಗಿತ್ತು. ಊಟ ಸೇವಿಸಿದ ಒಂದೂವರೆ ಗಂಟೆಯ ಬಳಿಕ ನಾಲ್ವರು ವಿದ್ಯಾರ್ಥಿಗಳಲ್ಲಿ ವಾಂತಿ–ಭೇದಿ ಕಾಣಿಸಿಕೊಂಡಿದೆ. ಬಳಿಕ ಮತ್ತೆ ಕೆಲವು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರಿಂದ ಆಂಬುಲೆನ್ಸ್‌ ಮೂಲಕ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಶಾಲೆ ಮುಗಿಸಿ ಮನೆಗೆ ಮರಳಿದ ಬಳಿಕ ಮತ್ತಷ್ಟು ವಿದ್ಯಾರ್ಥಿಗಳಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.​

‘ಆಸ್ಪತ್ರೆಗೆ ದಾಖಲಾದ ಎಲ್ಲ 39 ಮಕ್ಕಳು ಚೇತರಿಸಿಕೊಂಡಿದ್ದು, ಆರೋಗ್ಯ ಸ್ಥಿರವಾಗಿದೆ. ಕಲುಷಿತ ಆಹಾರ ಸೇವಿನೆಯಿಂದ ಈ ತೊಂದರೆ ಉಂಟಾಗಿರುವ ಸಾಧ್ಯತೆ ಇದೆ. ಪಾಲಕರು ಭಯಪಡುವ ಅಗತ್ಯವಿಲ್ಲ’ ಎಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ ಸ್ಪಷ್ಟಪಡಿಸಿದ್ದಾರೆ.

Whatsapp Group Join
facebook Group Join

Related Post

Leave a Reply

Your email address will not be published. Required fields are marked *

error: Content is protected !!