Mon. Dec 1st, 2025

ವಿದ್ಯುತ್ ಪೂರೈಕೆ ವೈಫಲ್ಯದಿಂದ ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ವಿದ್ಯುತ್ ಪೂರೈಕೆ ವೈಫಲ್ಯದಿಂದ ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಜ ೨೭: ಬೈಯ್ಯಪ್ಪನಹಳ್ಳಿ ಮತ್ತು ಎಂಜಿ ರಸ್ತೆ ನಿಲ್ದಾಣಗಳ ನಡುವೆ ವಿದ್ಯುತ್‌ ವ್ಯತ್ಯಯದಿಂದಾಗಿ ಶನಿವಾರ ಬೆಳಗ್ಗೆ ರೈಲು ಸಂಚಾರ ಸ್ಥಗಿತಗೊಂಡಿದ್ದರಿಂದ ನಮ್ಮ ಮೆಟ್ರೋ ಪ್ರಯಾಣಿಕರು ಪರದಾಡಿದರು .

ಇಂದಿರಾನಗರ ಮೆಟ್ರೊ ನಿಲ್ದಾಣದಲ್ಲಿ ಬೆಳಗ್ಗೆ 9.30ರ ಸುಮಾರಿಗೆ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ನೂರಾರು ಪ್ರಯಾಣಿಕರು ಮೆಟ್ರೊ ನಿಲ್ದಾಣಗಳಲ್ಲಿ ಸಿಲುಕಿಕೊಂಡರು . ನೇರಳೆ ಮಾರ್ಗದ ಎಂಜಿ ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ಒಂದು ಗಂಟೆ ಕಾಲ ರೈಲು ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ( ಬಿಎಂಆರ್‌ಸಿಎಲ್ ) ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯನಿರ್ವಾಹಕ ನಿರ್ದೇಶಕ (ಕಾರ್ಯಾಚರಣೆ ಮತ್ತು ನಿರ್ವಹಣೆ) ಶಂಕರ್ ಎಎಸ್ ಅವರು ಮೂರನೇ ರೈಲು ವ್ಯವಸ್ಥೆಗೆ ವಿದ್ಯುತ್ ಸರಬರಾಜು ವಿಫಲವಾದ ಪರಿಣಾಮವಾಗಿ ರೈಲು ಸೇವೆಗಳಲ್ಲಿ ಅಡಚಣೆ ಉಂಟಾಗಿದೆ ಎಂದು  ತಿಳಿಸಿದರು.

“ನಮ್ಮ ಸಿಬ್ಬಂದಿ ವಿದ್ಯುತ್ ಪೂರೈಕೆಯನ್ನು ಪುನಃಸ್ಥಾಪಿಸಲು ಮತ್ತು ಸೇವೆಗಳನ್ನು ಪುನರಾರಂಭಿಸಲು ಕೆಲಸದಲ್ಲಿದ್ದಾರೆ” ಎಂದು ಅವರು ಹೇಳಿದರು. ಇಂದಿರಾನಗರ ಮೆಟ್ರೋ ನಿಲ್ದಾಣದಲ್ಲಿ, ಮೆಟ್ರೋ ಪ್ರಯಾಣಿಕರು ಸೇವೆಗಳನ್ನು ಮರುಸ್ಥಾಪಿಸುವ ಬಗ್ಗೆ ಸರಿಯಾದ ಸಂವಹನವನ್ನು ನೀಡದಿದ್ದಕ್ಕಾಗಿ ಮೆಟ್ರೋ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದರು ಮತ್ತು ಶುಲ್ಕ ಮರುಪಾವತಿಗೆ ಒತ್ತಾಯಿಸಿದರು.

ನೇರಳೆ ಮಾರ್ಗದಲ್ಲಿ ಬೈಯಪ್ಪನಹಳ್ಳಿಯಿಂದ ವೈಟ್‌ಫೈಡ್ ಮತ್ತು ಎಂಜಿ ರಸ್ತೆಯಿಂದ ಚಲ್ಲಘಟ್ಟ ನಡುವೆ ಸೇವೆಗಳು ಲಭ್ಯವಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ಗ್ರೀನ್ ಲೈನ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

Related Post

Leave a Reply

Your email address will not be published. Required fields are marked *

error: Content is protected !!