ಯಾದಗಿರಿ, ಏ.೨೧:- ಕನ್ನಡ ಚಿತ್ರರಂಗದ ವರನಟ, ನಾಡೋಜ ಡಾ. ರಾಜ್ ಕುಮಾರ್ ಅವರ ಜನ್ಮದಿನವನ್ನು ಈ ಬಾರಿಯೂ ಅರ್ಥಪೂರ್ಣವಾಗಿ ಹಾಗೂ ಸಾಂಸ್ಕೃತಿಕ ರೀತಿಯಲ್ಲಿ
ಈ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಗೆ ಸಹಾಯಕ ಆಯುಕ್ತರಾದ ಹಂಪಣ್ಣ ಸಜ್ಜನ್ ಅವರು ಅಧ್ಯಕ್ಷತೆ ವಹಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದು, ಕಾರ್ಯಕ್ರಮದ ಎಲ್ಲಾ ಆಯಾಮಗಳ ಬಗ್ಗೆ ಚರ್ಚೆ ನಡೆಯಿತು.
ಕಾರ್ಯಕ್ರಮವನ್ನು ಏಪ್ರಿಲ್ 24ರಂದು ಬೆಳಿಗ್ಗೆ 10:30ಕ್ಕೆ ಯಾದಗಿರಿ ನಗರದ ಪದವಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಅದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾರ್ಯಕ್ರಮದಂದು ವೇದಿಕೆ ಕಾರ್ಯಕ್ರಮ, ಅತಿಥಿಗಳ ಸನ್ಮಾನ, ಉಪನ್ಯಾಸಗಳು ಹಾಗೂ ಡಾ.ರಾಜ್ ಗೀತಗಾಯನ ಸ್ಪರ್ಧೆ ನಡೆಯಲಿವೆ.
ವೇದಿಕೆ ಸಿದ್ಧತೆ, ಆಹ್ವಾನ ಪತ್ರಿಕೆ, ಅತಿಥಿ ಆಹ್ವಾನ ಸೇರಿದಂತೆ ಇತರ ಲಾಜಿಸ್ಟಿಕ್ ವ್ಯವಸ್ಥೆಗಳನ್ನು ಶಿಸ್ತಿನಿಂದ ನಿಭಾಯಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ನಿಖರ ಸೂಚನೆಗಳು ನೀಡಲಾಯಿತು. ಈ ಬಾರಿಯು ಡಾ. ರಾಜ್ ಅಭಿಮಾನಿಗಳ ಸಂಘ-ಸಂಸ್ಥೆಗಳು ಸಹ ಭಾಗಿ ಮಾಡಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮುಂದಾಗಬೇಕೆಂದು ಮನವಿ ಮಾಡಲಾಗಿದೆ.
ಅಲ್ಲದೆ, ಕಳೆದ ಎರಡು ವರ್ಷಗಳಲ್ಲಿ ನಡೆದ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳ ಕಾರಣದಿಂದ ಮಹನೀಯರ ಜಯಂತಿ ಸರಳವಾಗಿ ಆಚರಿಸಲಾಗಿತ್ತು. ಈ ಬಾರಿಯು ಸಾಂಸ್ಕೃತಿಕ ವೈಭವದೊಂದಿಗೆ, ಶಿಸ್ತುಬದ್ಧವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕೆಂದು ನಿರ್ಧಾರವಾಗಿದೆ. ಎಲ್ಲ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕೆಂದು ಸೂಚನೆ ನೀಡಲಾಗಿದೆ.
ಪೊಲೀಸ್ ಬಂದೋಬಸ್ತ್, ಕುಡಿಯುವ ನೀರಿನ ವ್ಯವಸ್ಥೆ, ತಂಗುದಾಣ ವ್ಯವಸ್ಥೆ ಸೇರಿದಂತೆ ಎಲ್ಲ ಆವಶ್ಯಕ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ಕಾರ್ಯಕ್ರಮದಲ್ಲಿ ಹಿರಿಯ ಸಹಾಯಕ ನಿರ್ದೇಶಕರು (ಪ್ರ) ಸುಲೈಮಾನ್ ನದಾಫ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.