Tue. Nov 25th, 2025

ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ ಎಂದು ಎಕ್ಸ್ ನಲ್ಲಿ ಪ್ರತಿಕ್ರಿಯೆ – ಪ್ರತಾಪ್ ಸಿಂಹ

ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ ಎಂದು  ಎಕ್ಸ್ ನಲ್ಲಿ ಪ್ರತಿಕ್ರಿಯೆ – ಪ್ರತಾಪ್ ಸಿಂಹ

ಜ ೦೨: ಅಕ್ರಮವಾಗಿ ಮರ ಕಡಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹಗೆ ಜಾಮೀನು ಮಂಜೂರಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. 

ತಲೆಮರೆಸಿಕೊಳ್ಳುವವರು ತಮ್ಮದೇ ಕಾರಿನಲ್ಲಿ ಫೋನ್ ಆನ್ ಮಾಡಿಕೊಂಡು ಬೆಂಗಳೂರಿಗೆ ಹೋಗುವುದಿಲ್ಲ. ನ್ಯಾಯಾಧೀಶರಿಗೆ ಧನ್ಯವಾದಗಳು. ಹಾಗು ಕರೆ, ಸಾಮಾಜಿಕ ಜಾಲತಾಣಗಳಲ್ಲಿ ಮೆಸೇಜ್ ಮೂಲಕ ಬೆನ್ನಿಗೆ ನಿಂತ ನಿಮ್ಮೆಲ್ಲರಿಗೂ ಮತ್ತು ಮಾಧ್ಯಮ ಮಿತ್ರರಿಗೂ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

ಬೇಲೂರು ತಾಲೂಕಿನ ನಂದಗೋಡನಹಳ್ಳಿ ಬಳಿ 126ಕ್ಕೂ ಹೆಚ್ಚು ಮರ ಕಡಿದು ಸಾಗಣೆ ಪ್ರಕರಣದಲ್ಲಿ ನಿನ್ನೆ ಬಂಧಿಸಲಾಗಿತ್ತು. ಪ್ರಕರಣ ಸಬಂಧ ರಾಕೇಶ್ ಶೆಟ್ಟಿ, ಜಯಮ್ಮ ವಿರುದ್ಧ ಬೇಲೂರು ತಹಶೀಲ್ದಾರ್ ಮಮತಾ ನೀಡಿದ್ದ ದೂರು ಆಧರಿಸಿ FIR ದಾಖಲಾಗಿತ್ತು. ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪ ಹಿನ್ನೆಲೆ ವಿಕ್ರಂ ಸಿಂಹರನ್ನು ಬಂಧಿಸಲಾಗಿತ್ತು. ವಿಕ್ರಂ ಸಿಂಹರನ್ನು ಇಂದು ಜಡ್ಜ್​​ ಮುಂದೆ ಅರಣ್ಯಾಧಿಕಾರಿಗಳು ಹಾಜರುಪಡಿಸಿದ್ದರು.

Related Post

Leave a Reply

Your email address will not be published. Required fields are marked *

error: Content is protected !!