ಸುಪ್ರೀಂ ಆದೇಶ:ವಿವಿಧ ಸಂಘಟನೆಗಳ ಪ್ರತಿಭಟನೆ
ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್‌ನಂತೆ ಇನ್ನೂ 15ದಿನ ನೀರು ಬಿಡುವಂತೆ ಸುಪ್ರೀಂ ರಾಜ್ಯಕ್ಕೆ ಆದೇಶಿಸಿದ ಬೆನ್ನಲ್ಲೇ ಪ್ರತಿಭಟನೆ ಶುರುವಾಗಿದೆ. ಬೆಂಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ರೈತರು, ಕರ್ನಾಟಕ ರಕ್ಷಣಾ ವೇದಿಕೆ ಸೇರಿ ವಿವಿಧ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿದ್ದು, ಆದೇಶದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ. ರಕ್ಷಣಾ ವೇದಿಕೆಯು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಮೈಸೂರಿನಲ್ಲಿ ರೈತರು ಪೊರಕೆ ಚಳವಳಿ ನಡೆಸಿದ್ದಾರೆ.
ರೈತರು, ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತಿದೆ. ಮತ್ತೊಂದೆಡೆ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಾವಿರಾರು ರೈತರು ಜಮಾಯಿಸಿದ್ದು, ತಮಿಳುನಾಡಿಗೆ ನೀರು ಬಿಟ್ಟಿರುವ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ.
ಕೆಆರ್‌ಸ್ ಡ್ಯಾಂನಿಂದ ಕರ್ನಾಟಕ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ವಿರೋಧಿಸಿದೆ. ಇದು ಬೆಂಗಳೂರಿನಲ್ಲಿ ಪ್ರತಿಭಟನೆಗೆ ಕರೆ ನೀಡಿರುವ ಕರವೇ (ನಾರಯಣ ಗೌಡ ಬಣ) ರಾಜ್ಯ ಸರ್ಕಾರಕ್ಕೆ ಮಾತಿನ ಮೂಲಕ ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲದೆ ಪ್ರತಿಭಟನೆಯ ಭಾಗವಾಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕೂಡ ತೀರ್ಮಾನಿಸಿದೆ. ಪ್ರತಿಭಟನೆ ಮತ್ತು Rally ತಡೆಯಲು ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿದೆ.
ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ R.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಡಿಎಂಕೆ ಹಾಗೂ ತಮಿಳುನಾಡು ಸಿಎಂ ವಿರುದ್ಧ ನಮ್ಮ ಸಿಎಂ ಸಿದ್ದರಾಮಯ್ಯ ಒಂದು ಮಾತು ಆಡುವುದಿಲ್ಲ. ಆದರೆ ಈ ವಿವಾದಕ್ಕೆ ಸಂಬಂಧವೇ ಇಲ್ಲದ ಪ್ರಧಾನಿ ನರೇಂದ್ರ ಮೋದಿಯನ್ನು ಸಿಎಂ ಎಳೆದು ತರುತ್ತಾರೆ. ಲೋಕಸಭೆ ಚುನಾವಣೆ ಗೆಲ್ಲಲು ರಾಜ್ಯಕ್ಕೆ ಹಾಗೂ ಇಲ್ಲಿನ ಜನರಿಗೆ ಕಾಂಗ್ರೆಸ್ ಅನ್ಯಾಯ ಮಾಡಿದೆ ಎಂದು ಕಿಡಿಕಾರಿದರು