ಯಾದಗಿರಿ ಫೆ ೧೪:- ನವ ಕರ್ನಾಟಕ ರಾಜ್ಯ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟ (ರಿ.), ಯಾದಗಿರಿ ವತಿಯಿಂದ ನಿರ್ಮಾಣ ಕಾರ್ಮಿಕರಿಗೆ RPL
ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಹನುಮಂತ ಮೋಟ್ನಳ್ಳಿ ಮತ್ತು ತಾಲ್ಲೂಕು ಅಧ್ಯಕ್ಷ ಭೀಮರಾಯ ಹತ್ತಿಕುಣಿ ಅವರ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳು ಕಾರ್ಮಿಕರಿಗೆ ಕಿಟ್ ವಿತರಿಸಿದರು.
RPL ಯೋಜನೆಯ ನಿಯೋಜಕರಾದ ವೀರೇಶ್ ಅವರು ಈ ಕಾರ್ಯಕ್ರಮದಲ್ಲಿ ಮಾತನಾಡಿ, ಕಾರ್ಮಿಕರ ಹಿತಕ್ಕಾಗಿ ಒಕ್ಕೂಟದ ಸೈಯೋಜನೆಯೊಂದಿಗೆ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಈ ಕಿಟ್ ಮತ್ತು ಪ್ರಮಾಣಪತ್ರ ಕಾರ್ಮಿಕರಿಗೆ ಅವರ ಕೆಲಸದ ಕೌಶಲ್ಯವನ್ನು ಹೆಚ್ಚಿಸಲು ಹಾಗೂ ಭವಿಷ್ಯದಲ್ಲಿ ಹೆಚ್ಚು ಅವಕಾಶಗಳನ್ನು ಪಡೆಯಲು ಸಹಕಾರಿಯಾಗಲಿದೆ.