ನ ೧೧: ಹಾಸನದ ಹಾಸನಾಂಬ ದೇವಸ್ಥಾನದಲ್ಲಿ ಶುಕ್ರವಾರ ಮಧ್ಯಾಹ್ನ ಕೆಲವರಿಗೆ ವಿದ್ಯುತ್ ಶಾಕ್ ಉಂಟಾದ ಹಿನ್ನೆಲೆಯಲ್ಲಿ ನೂಕುನುಗ್ಗಲು ಉಂಟಾದ ಘಟನೆ ನಡೆದಿದೆ . ಅಲ್ಲಿದ್ದ ವಿದ್ಯುತ್ ತಂತಿ ತುಂಡಾಗಿ ಈ ಘಟನೆ ನಡೆದಿದೆ. ಕೆಲವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆದರೆ, ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. “ಮಧ್ಯಾಹ್ನ 1.30 ರ ಸುಮಾರಿಗೆ, ಸಮೀಪದಲ್ಲಿ ತಂತಿ ತುಂಡಾಗಿ ಸ್ವಲ್ಪ ವಿದ್ಯುತ್ ಶಾಕ್ ಸಂಭವಿಸಿದೆ. ಜನರು ಭಯಭೀತರಾಗಿ ಓಡಲು ಪ್ರಾರಂಭಿಸಿದರು. ಮೂವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ, ಇನ್ನೂ ಕೆಲವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ” . ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. “ದರ್ಶನಕ್ಕೆ ಸಮಯ ಕಡಿಮೆ, ಜನಜಂಗುಳಿ ಜಾಸ್ತಿಯಾಗಿದೆ. ಈಗ ಸರಿಯಾಗಿ ಎಲ್ಲ ವ್ಯವಸ್ಥೆ ಮಾಡಿದ್ದೇವೆ.” ಈ ವೇಳೆ ಕೆಇಬಿ ಹಾಗೂ ಹೆಸ್ಕಾಂ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.
ಹಾಸನಾಂಬೆ ದರ್ಶನದ ವೇಳೆ ಕರೆಂಟ್ ಶಾಕ್.. ಜಿಲ್ಲಾಧಿಕಾರಿಗೆ ಗೊತ್ತೇ ಇಲ್ವಂತೆ!
ಹಾಸನದ ಹಾಸನಾಂಬೆ ದೇವಾಲಯದಲ್ಲಿ ಕರೆಂಟ್ ಶಾಕ್‌ನಿಂದಾಗಿ ಸಂಭವಿಸಿದ ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಆದರೆ, ಈ ಸಂಬಂಧ ಜಿಲ್ಲಾಧಿಕಾರಿ ಸತ್ಯಭಾಮಾ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ಇಲ್ಲ. ಪರಿಶೀಲಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದೇವಾಲಯದ ಬಾಗಿಲು ತೆರೆಯುವ ದಿನ ಸತ್ಯಭಾಮಾ ಮತ್ತು ಅವರ ಪತಿ ಕಳಶ ಪೂಜೆಯಲ್ಲಿ ಭಾಗವಹಿಸಿರುವುದು ಸಹ ತೀವ್ರ ವಿವಾದಕ್ಕೆ ಕಾರಣವಾಗಿತ್ತು.