Tue. Jul 22nd, 2025

ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ

ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ

ಜ ೨೫: ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಹೊಸ ಪಿಂಚಣಿ ಯೋಜನೆ(ಎನ್ ಪಿಎಸ್)ಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.

ಈ ಕುರಿತು ಈ ಎಕ್ಸ್‌ನಲ್ಲಿ ಆದೇಶದ ಪ್ರತಿಯ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2006 ಏಪ್ರಿಲ್‌ಗೆ ಪೂರ್ವ ನೇಮಕಾತಿ ಪ್ರಕಟಣೆ ಹೊರಡಿಸಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ.

ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಕ್ಕೆ ಬಂದ ನಂತರ ನಾವು ಬೇಡಿಕೆ ಸಲ್ಲಿಸುವ ಭರವಸೆ ನೀಡಿದ್ದೆ, ಮಾತಿನಂತೆ ಬೇಡಿಕೆ ಸಲ್ಲಿಸಿ ನುಡಿದಂತೆ ನಡೆದಿದ್ದೇನೆ.

ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸುತ್ತೇನೆ ಎಂದು ಸಿಎಂ ಪೋಸ್ಟ್ ಮಾಡಿದ್ದಾರೆ.

ಮೊದಲಿನಿಂದಲೂ ಡಿಫೈಂಡ್‌ ಪಿಂಚಣಿ ಯೋಜನೆ ಬದಲಾವಣೆ ಮಾಡಿ 2006 ರ ನಂತರ ನೇಮಕವಾದ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ಜಾರಿಗೆ ತರಲಾಯಿತು. ಈ ಯೋಜನೆಯನ್ನು ವಿರೋಧಿಸಿ ರಾಜ್ಯ ಸರ್ಕಾರಿ ನೌಕರರ ಹೋರಾಟ ಮತ್ತೆ ಹಿಂದಿನ ಯೋಜನೆ ವ್ಯಾಪ್ತಿಗೆ ಸೇರಿಸುವಂತೆ ಹಿಡಿದಿದ್ದರು. ಸದ್ಯ ಸರ್ಕಾರ ಒಂದು ಬಾರಿ ಬದಲಾವಣೆಗೆ ಅವಕಾಶ ಮಾಡಿಕೊಟ್ಟಿದೆ.

ಈ ಬಗ್ಗೆ ಹಲವು ಷರತ್ತುಗಳನ್ನು ವಿಧಿಸಿದ್ದು, ನೌಕರರು ಇಚ್ಛೆಪಟ್ಟಲ್ಲಿ ಮಾತ್ರ ಒಮ್ಮೆ ಬದಲಾವಣೆಗೆ ಅವಕಾಶ ನೀಡಲಾಗಿದೆ. ಈ ಕುರಿತು ಅರ್ಜಿ ನಮೂನೆಯನ್ನು ಜೂನ್ 30 ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ತಿಳಿಸಲಾಗಿದೆ.

Whatsapp Group Join
facebook Group Join

Related Post

Leave a Reply

Your email address will not be published. Required fields are marked *

error: Content is protected !!