Mon. Dec 1st, 2025

ಯಾದಗಿರಿ: ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಸಾವು,ಇನ್ನು ಮೂವರು ತೀವ್ರವಾಗಿ ಗಾಯಗ

ಯಾದಗಿರಿ: ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಸಾವು,ಇನ್ನು ಮೂವರು ತೀವ್ರವಾಗಿ ಗಾಯಗ

ಯಾದಗಿರಿ, ಸೆ ೨೩:- ಯಾದಗಿರಿ ಜಿಲ್ಲೆಯಲ್ಲಿ ಸಾಯಂಕಾಲ ಸಮಯದಲ್ಲಿ ಸುರಿದ ಮಳೆಯಿಂದ ತೀವ್ರ ಅನಾಹುತ ಸಂಭವಿಸಿದೆ. ಗುಡುಗು ಸಹಿತ ಬಿರುಗಾಳಿ ಮಳೆಯಿಂದಾಗಿ ಸಿಡಿಲು ಬಡಿದು ಮೂವರು ವ್ಯಕ್ತಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಜೀನಕೇರ ತಾಂಡದಲ್ಲಿ ನಡೆದಿದೆ. ಈ ದುರ್ಘಟನೆ ಸ್ಥಳೀಯರಲ್ಲಿ ತೀವ್ರ ದುಃಖವನ್ನುಂಟುಮಾಡಿದೆ.

ಸಾವಿನ ದುರ್ದೈವಿಗಳು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಈ ಅನಾಹುತ ಸಂಭವಿಸಿದೆ. ಸಾವನ್ನಪ್ಪಿದವರನ್ನು ಚೇನು (22), ಕಿಶನ್ (30), ಮತ್ತು ಸುಮಿಬಾಯಿ (30) ಎಂದು ಗುರುತಿಸಲಾಗಿದೆ. ಇನ್ನು, ಮೂವರು ತೀವ್ರವಾಗಿ ಗಾಯಗೊಂಡು ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Related Post

Leave a Reply

Your email address will not be published. Required fields are marked *

error: Content is protected !!