Tue. Jul 22nd, 2025

Yadgir,ಬ್ಲೂಟೂತ್ ಬಳಿಸಿ ಕೆಇಎ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ವಶಕ್ಕೆ ಪಡೆದ ಪೊಲೀಸರು

Yadgir,ಬ್ಲೂಟೂತ್  ಬಳಿಸಿ ಕೆಇಎ ಪರೀಕ್ಷೆ ಬರೆಯುತ್ತಿದ್ದ  ನಕಲಿ ಅಭ್ಯರ್ಥಿ ವಶಕ್ಕೆ ಪಡೆದ ಪೊಲೀಸರು

ಅ 28: ರಾಜ್ಯದಲ್ಲಿ ಪಿಎಸ್‌ಐ ಹಗರಣ ಮಾಸುವ ಮುನ್ನವೇ ಮತ್ತೊಂದು ಅಕ್ರಮ ಬಯಲಾಗಿದೆ. ಎಫ್‌ಡಿಎ ಮತ್ತು ಎಸ್‌ಡಿಎ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದ್ದು, ಬ್ಯೂಟೂತ್ ಬಳಸಿ ಎಕ್ಸಾಂ ಬರೆಯುತ್ತಿದ್ದವರನ್ನು ಬಂಧಿಸಲಾಗಿದೆ.  ಸೊನ್ನ ಗ್ರಾಮದ ತ್ರಿಮೂರ್ತಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

28 ಮತ್ತು 29ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗಾಗಿ ಕೆಇಎ ಪರೀಕ್ಷೆಯನ್ನು ನಡೆಸುತ್ತಿದೆ ಈ ನಡುವೆ ಯಾದಗಿರಿಯ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ಲೂಟೂತ್‌ ಬಳಕೆ ಮಾಡಿ ನಕಲು ಮಾಡುತ್ತಿದ್ದ ಅಭ್ಯರ್ಥಿಗಳನ್ನು ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಪುಟ್ಟಪ್ಪ ಎಂಬಾತ ಸೇರಿದಂತೆ ಮೂವರನ್ನ ವಶಕ್ಕೆ ಪಡೆಯಲಾಗಿದೆ. ಪುಟ್ಟಪ್ಪ ಮೂಲತಃ ಪಿಎಸ್‌ಐ ಹಗರಣ ಕಿಂಗ್ ಪಿನ್ ಆಗಿರುವ ಆರ್.ಡಿ ಪಾಟೀಲ್‌ ಗ್ರಾಮದವನು ಎಂಬ ಮಾಹಿತಿ ಲಭ್ಯವಾಗಿದೆ. ಈತ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗ್ರಾಮದ ಸೊನ್ನಾ ಗ್ರಾಮದವನು.

ವಿಚಾರಣೆ ವೇಳೆ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದವನು ನಕಲಿ ಅಭ್ಯರ್ಥಿ ಎಂಬುದು ದೃಢವಾಗಿದೆ. ಇನ್ನೂ ಪರೀಕ್ಷಾ ಕೇಂದ್ರದಲ್ಲಿ ಕಟ್ಟುನಿಟ್ಟಿನ ಕ್ರಮ ಇದ್ದರೂ ಬ್ಲೂಟೂತ್‌ ಬಳಸಿದದ್ದಾರೂ ಹೇಗೆ ಎಂಬ ಪ್ರಶ್ನೆ ಮೂಡಿದೆ.

ಸದ್ಯ ಪರೀಕ್ಷಾ ಕೇಂದ್ರದ ಹೊರಗಿದ್ದು ಮಾಹಿತಿ ನೀಡುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಎಲ್ಲರೂ ಕಲಬುರಗಿ ಮೂಲದವರು ಎಂದು ತಿಳಿದು ಬಂದಿದ್ದು, ಇವರೆಗೆ 6-8 ಜನರನ್ನು ನಡೆಸಲಾಗಿದೆ ಎಂದು ತಿಳಿದುಬಂದಿದೆ.

Whatsapp Group Join
facebook Group Join

Related Post

Leave a Reply

Your email address will not be published. Required fields are marked *

error: Content is protected !!